ಬೆಂಗಳೂರು,20ಅಕ್ಟೋಬರ್ :
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಬೆಂಗಳೂರು ಮೆಟ್ರೋದ ಪೂರ್ವ ಪಶ್ಚಿಮ ಕಾರಿಡಾರ್ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ ಮತ್ತು ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಎರಡು ಮೆಟ್ರೋ ಮಾರ್ಗಗಳನ್ನು ಪ್ರಧಾನಿ ಅಧಿಕೃತವಾಗಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದರು. ಅಧಿಕೃತ ಉದ್ಘಾಟನೆಗೆ ಕಾಯದೆ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ಎರಡು ಮೆಟ್ರೋ ಮಾರ್ಗಗಳನ್ನು ಇದೇ ಅಕ್ಟೋಬರ್ ೯ ರಿಂದ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿತ್ತು.
