ಬೆಂಗಳೂರು,21ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.
ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್
