ಮಿರ್ಜಾಪುರ, 22ಅಕ್ಟೋಬರ್ :
ಆ್ಯಂಕರ್ :ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ವಿಂಧ್ಯಾಚಲ ಧಾಮ್ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.
ಮೃತರನ್ನು ಭೋಲಾ (29) ಮತ್ತು ಕನೋಯಿ (45) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
