ಬೆಳಗಾವಿ, 24ಅಕ್ಟೋಬರ್ (ಹಿ.ಸ):
ಆ್ಯಂಕರ್ :ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ಎಂದು ಹೆಸರಾಗಿರುವ ಕಿತ್ತೂರು ಚನ್ನಮ್ಮನ ಉತ್ಸವ ಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ಜ್ಯೋತಿ ಇಂದು ಕಿತ್ತೂರು ತಲುಪಿದ್ದು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿವಿಧ ಜಾನಪದ ಕಲಾ ತಂಡಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರೆ, ಶಾಸಕ ಬಾಬಾಸಾಹೇಬ್ ಪಾಟೀಲ್ ಕಿತ್ತೂರು ಉತ್ಸವದ ನಂದಿ ಧ್ವಜಾರೋಹಣ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್
