ಗಾಂಧಿನಗರ, 25ಅಕ್ಟೋಬರ್ (ಹಿ.ಸ):
ಆ್ಯಂಕರ್ :
ನ್ಯಾನೊ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಕೃಷಿಯಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದ ಕಲೋಲ್ ಬಳಿ ಇಫ್ಕೋ ವತಿಯಿಂದ ದೇಶದ ಮೊದಲ ನ್ಯಾನೋ ಡಿಎಪಿ ಸ್ಥಾವರ ಉದ್ಘಾಟಿಸಿದ ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು ಮತ್ತು ಉತ್ಪಾದನೆಯ ಪ್ರಮಾಣದಲ್ಲಿ ರಾಜಿ ಮಾಡಿಕೊಳ್ಳದೆ ಕೃಷಿಯಲ್ಲಿ ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು. ನ್ಯಾನೊ ರೂಪಾಂತರಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ರಾಸಾಯನಿಕ ಗೊಬ್ಬರಗಳಿಗೆ ಯಶಸ್ವಿ ಪರ್ಯಾಯಗಳನ್ನು ತರುವಲ್ಲಿ ಇಫ್ಕೋ ಕೊಡುಗೆಯನ್ನು ಸಚಿವರು ಶ್ಲಾಘಿಸಿದರು. ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯ ನಂತರ ರೈತರಿಗೆ ಸಾಲದ ನೆರವಿನ ಹೆಚ್ಚಳದ ಜೊತೆಗೆ, ರಸಗೊಬ್ಬರ ಸಬ್ಸಿಡಿಯನ್ನು ಸರ್ಕಾರ ಹೆಚ್ಚಿಸಿದೆ ಎಂದು ಅಮಿತ್ ಶಾ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
