


ರಾಯಚೂರು, 26 ಅಕ್ಟೋಬರ್ (ಹಿ.ಸ):
ಆ್ಯಂಕರ್: ಈಶಾನ್ಯ ಕರ್ನಾಟಕ ಪದವಿಧರರ ಮತ ಕ್ಷೇತ್ರ ಚುನಾವಣೆಗೆ ನೊಂದಣಿ ಮಾಡಿಕೊಳ್ಳುವ ಮೂಲಕ ಈಶಾನ್ಯ ಪದವೀಧರರ ಮತಕ್ಷೇತ್ರಕ್ಕೆ ಮತದಾನ ಮಾಡುವ ಹಕ್ಕನ್ನು ಪ್ರತಿಯೊಬ್ಬ ಪದವೀಧರರು ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು ಹಾಗೂ ಜಿಲ್ಲಾ ಕನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಬಗಾಡೆ ಅವರು ಹೇಳಿದ್ದಾರೆ.
ಅವರು ಅ.26ರ(ಗುರುವಾರ) ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಲಯ, ಜಿಲ್ಲಾ ಪಂಚಾಯತ್, ತಾಲೂಕಾಡಳಿತ, ತಾಲೂಕು ಪಂಚಾಯತ್ ವತಿಯಿಂದ ಮತದಾರರ ವಿಶೇಷ ನೊಂದಣಿ ಅಭಿಯಾನವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಲು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ನ್ಯಾಯಾಲಯದಲ್ಲಿರುವ ಪದವೀಧರರು ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಲುವಂತೆ ತಿಳಿಸಿದರು.
ಇದೇ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಮಾತನಾಡಿ, ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ನ.6ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ನ.23ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟವಾಗುತ್ತದೆ ಅದಾದ ನಂತರ ಡಿ.9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲು ಅವಧಿಯನ್ನು ನಿಗದಿಪಡಿಲಾಗಿದ್ದು, ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ಈಶಾನ್ಯ ಪದವೀಧರರ ಮತಕ್ಷೇತ್ರಕ್ಕೆ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾದೀಶರಾದ ಜಗದೀಶ, ಅತ್ತಿಕಾಳು ಪ್ರಭು, ದಯಾನಂದ ಬೇಲೂರೆ, ಸಹಾಯಕ ಆಯುಕ್ತೆ ಮಹಿಬೂಬಿ, ತಹಶೀಲ್ದಾರ ಸುರೇಶ ವರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಭಾನುರಾಜ, ಕಾರ್ಯದರ್ಶಿ ಉದಯಕುಮಾರ, ಮತದಾರರ ಸಾಕ್ಷಾರತಾ ಕ್ಲಬ್ನ ಸಂಪನ್ಮೂಲ ವ್ಯಕ್ತಿ ದಂಡಪ್ಪ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
