
ನವದೆಹಲಿ, 29ಅಕ್ಟೋಬರ್ (ಹಿ.ಸ):
ಆ್ಯಂಕರ್ :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ತಿಂಗಳ ೩೧ ಹಾಗೂ ನವೆಂಬರ್ ೧ ರಂದು ಎರಡು ದಿನಗಳ ಕಾಲ ಲಡಾಖ್ ಪ್ರವಾಸ ಕೈಗೊಳ್ಳಲಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ನಂತರ ರಾಷ್ಟ್ರಪತಿ ಅವರು, ಇಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಲೇ ದಲ್ಲಿರುವ ಸಿಂಧು ಸಂಸ್ಕೃತಿ ಕೇಂದ್ರದ ನಾಲ್ಕನೇ ಸಂಸ್ಥಾಪನಾ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಲಿದ್ದಾರೆ. ಲಡಾಖ್ನಲ್ಲಿ ವಾಸ್ತವ್ಯ ಹೂಡಲಿರುವ ರಾಷ್ಟ್ರಪತಿ ಅವರು ಬುಡಕಟ್ಟು ಜನಾಂಗದವರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್
