ಹುಬ್ಬಳ್ಳಿ, 29ಅಕ್ಟೋಬರ್ (ಹಿ.ಸ):
ಆ್ಯಂಕರ್ :ಹುಬ್ಬಳ್ಳಿಯಿಂದ ಮುಂಬೈಗೆ ಈ ಹಿಂದೆ ಎಟಿಆರ್ ವಿಮಾನ ಸಂಚರಿಸುತ್ತಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ೧೮೬ ಆಸನಗಳ ವ್ಯವಸ್ಥೆ ಇರುವ ಇಂಡಿಗೋ
ವಿಮಾನ ಸೇವೆ ಆರಂಭಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ಮುಂಬೈಗೆ ವಿಮಾನ ಸೇವೆ ಆರಂಭಿಸುವಂತೆ ಇಂಡಿಗೋ ಸಂಸ್ಥೆಗೆ ಮನವಿ ಮಾಡಿದ್ದು, ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಡಿಗೋ ಸಂಸ್ಥೆ ನೂತನ ವಿಮಾನ ಸೇವೆ ಆರಂಭಿಸಿದೆ. ಹುಬ್ಬಳ್ಳಿಯಿಂದ ಮುಂಬೈಗೆ ತೆರಳುವ ಪ್ರಯಾಣಿಕರ ಪ್ರಯಾಣ ಇನ್ನು ಮುಂದೆ ಸುಖಕರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
