ದಾವಣಗೆ,29ಅಕ್ಟೋಬರ್ (ಹಿ.ಸ):
ಆ್ಯಂಕರ್ :ಕೇಂದ್ರ ಸರ್ಕಾರ ಕ್ರೀಡಾಪಟುಗಳಿಗೆ ನೀಡಿದ ಪ್ರೋತ್ಸಾಹದ ಪರಿಣಾಮದಿಂದ ಭಾರತ ಇಂದು ವಿಶ್ವ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.
ದಾವಣಗೆರೆಯಲ್ಲಿ ನಡೆದ ಅಂತಾರಾಷ್ಟ್ರೀಯ ಪುರುಷರ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಟ್ರೋಫಿ ವಿತರಿಸಿದ ನಂತರ ಅವರು ಮಾತನಾಡಿದರು.
ಕಳೆದ ಒಂಭತ್ತು ವರ್ಷಗಳಲ್ಲಿ ಭಾರತದ ಕ್ರೀಡಾಪಟುಗಳು ಒಲಿಂಪಿಕ್ ಸೇರಿದಂತೆ ಎಲ್ಲ ಕ್ರೀಡಾಕೂಟಗಳಲ್ಲಿ ನೂರಾರು ಪದಕಗಳನ್ನು ಗೆಲ್ಲುವ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕ್ರೀಡಾಪಟುಗಳ ಈ ಸಾಧನೆಯ ಹಿಂದೆ ಕೇಂದ್ರ ಸರ್ಕಾರದ ಪ್ರೋತ್ಸಾಹವಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
