
ನವದೆಹಲಿ, 31ಅಕ್ಟೋಬರ್ (ಹಿ.ಸ):
ಆ್ಯಂಕರ್ : ಕಾವೇರಿ ನದಿ ನೀರು ವಿವಾದ ಸಂಬಂಧ ಇಂದು (ಅಕ್ಟೋಬರ್ 30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ ಅಂತ್ಯದ ವರಗೆ 3 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಮಾಡಿದ್ದ ಆದೇಶ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
