ನವದೆಹಲಿ , 1 ನವೆಂಬರ್ (ಹಿ.ಸ):
ಆ್ಯಂಕರ್ :ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪದಕ ವಿಜೇತರಾದ ಭಾರತದ ನಿಯೋಗದೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮವು ಏಷ್ಯನ್ ಪ್ಯಾರಾ ಗೇಮ್ಸ್ ೨೦೨೨ ರಲ್ಲಿ ಅತ್ಯುತ್ತಮ ಸಾಧನೆಗಾಗಿ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಪ್ರಧಾನಿ ಅವರ ಪ್ರಯತ್ನವಾಗಿದೆ. ಏಷ್ಯನ್ ಪ್ಯಾರಾ ಗೇಮ್ಸ್ ೨೦೨೨ ರಲ್ಲಿ ಭಾರತ ೨೯ ಚಿನ್ನದ ಪದಕಗಳು ಸೇರಿದಂತೆ ಒಟ್ಟು ೧೧೧ ಪದಕಗಳನ್ನು ಗೆದ್ದಿದೆ. ಹಾಲಿ ಆವೃತ್ತಿಯಲ್ಲಿ ಗೆದ್ದಿರುವ ಒಟ್ಟು ಪದಕಗಳ ಸಂಖ್ಯೆಯು ೨೦೧೮ ರ ಹಿಂದಿನ ಅತ್ಯುತ್ತಮ ಪ್ರದರ್ಶನಕ್ಕಿಂತ ಶೇಕಡಾ ೫೪ ರಷ್ಟು ಹೆಚ್ಚಾಗಿದೆ. ಈ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ಅವರ ತರಬೇತುದಾರರು, ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿ, ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
