ಬೆಂಗಳೂರು , 1 ನವೆಂಬರ್ (ಹಿ.ಸ):
ಆ್ಯಂಕರ್ :
ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ ಜೈ ಕರ್ನಾಟಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
