ಹಾಸನ, 2 ನವೆಂಬರ್ (ಹಿ.ಸ):
ಆ್ಯಂಕರ್ :
ಇಂದಿನಿಂದ ಅಂದ್ರೆ ನವೆಂಬರ್ 2 ರಿಂದ 15ರವರೆಗೆ ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆಯಾದ ಹಾಸನಾಂಬೆ ದರ್ಶನಕ್ಕೆ ಅವಕಾಶ ಸಿಗಲಿದೆ. ಜಿಲ್ಲಾಡಳಿತ ಮತ್ತು ಅರ್ಚಕರ ಸಮ್ಮುಖದಲ್ಲಿ ಮಧ್ಯಾಹ್ನ 12.30 ಗರ್ಭಗುಡಿಯ ಬಾಗಿಲನ್ನು ತೆಗೆಯಲಾಗುತ್ತದೆ.
ನಂತರ ಒಂದು ವರ್ಷದಿಂದ ಸಪ್ರೋಕ್ಷಣೆ ನಡೆಯುತ್ತದೆ. ಮೊದಲನೇಯ ಮತ್ತು ಕಡೆಯ ಅಂದ್ರೆ ನವೆಂಬರ್ 2 ರಂದು ನಂತರ 15ಕ್ಕೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ ಒಟ್ಟು 12 ದಿನಗಳ ಕಾಲ ಈ ಬಾರಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡುತ್ತಿದೆ. ಹೀಗಾಗಿ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಉದ್ದದ ಸಾಲುಗಳನ್ನ ನಿರ್ಮಿಸಲಾಗಿದೆ.
ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಮಾಡಿಕೊಂಡಿದೆ. ಅಲ್ಲದೇ ಬರುವ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಪ್ರತ್ಯೇಕ ಮಳಿಗೆಗಳನ್ನ ಮಾಡಿದೆ.
ಭಕ್ತಿಯಿಂದ ಬೇಡಿದ ವರವನ್ನ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದರ್ಶನ ಪಡೆಯಲು ಬೇರೆ ಜಿಲ್ಲೆಗಳಿಂದ ಮಾತ್ರವಲ್ಲ ಬೇರೆ ರಾಜ್ಯಗಳಿಂದಲೂ ಆಗಮಿಸುತ್ತಾರೆ. ಪ್ರತಿ ವರ್ಷ ಅಶ್ವೀಜ ಮಾಸದ ಮೊದಲನೇ ಗುರುವಾರ ತಾಯಿಯ ಬಾಗಿಲು ತೆರೆಯಲಾಗುತ್ತದೆ. ದೀಪಾವಳಿಯ ಮರುದಿನ ಬಾಗಿಲನ್ನು ಮುಚ್ಚಲಾಗುತ್ತದೆ.. ವರ್ಷಕ್ಕೊಮ್ಮೆ ಮಾತ್ರ ದರುಶನ ಭಾಗ್ಯ ನೀಡುವ ತಾಯಿಯ ಮಹಿಮೆಯೂ ಅಪಾರವಾಗಿದೆ.
ಹಿಂದೂಸ್ತಾನ್ ಸಮಾಚಾರ್
