
ನವದೆಹಲಿ, 2 ನವೆಂಬರ್ (ಹಿ.ಸ):
ಆ್ಯಂಕರ್ :
ಛತ್ತೀಸ್ ಗಢ ವಿಧಾನಸಭೆಯ ಮೊದಲನೇ ಹಂತದ ಚುನಾವಣೆಗೆ ಇನ್ನು ೫ ದಿನ ಮಾತ್ರ ಬಾಕಿಯಿರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ತೀವ್ರಗೊಂಡಿದೆ. ಇದೇ ತಿಂಗಳ ೭ರಂದು ೨೦ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಕ್ಷೇತ್ರಗಳು ಬಹುತೇಕ ಮಾವೋವಾದಿಗಳಿಂದ ಬಾಧಿತ ಕ್ಷೇತ್ರಗಳಾಗಿವೆ. ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಕನ್ಕೇರ್ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ಕೈಗೊಂಡು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸುವರು. ಮಧ್ಯಾಹ್ನ ಅವರು, ಗೋವಿಂದ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅವರು, ನಿನ್ನೆ ಬಸ್ತಾರ್ ವಲಯದ ಸುಕ್ಮಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್
