
ರಾಯಚೂರು, 4 ನವೆಂಬರ್ (ಹಿ.ಸ):
ಆ್ಯಂಕರ್ : 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲು ಅರ್ಹ ಪೋಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆ ಹಾಗೂ ಇನ್ನಿತರ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣ ರಾಯಚೂರು ಇಲ್ಲಿ ಸಂಪರ್ಕಿಸಿ ದಾಖಲೆ ಪ್ರಮಾಣ ಪತ್ರಗಳೊಂದಿಗೆ ಪೂರ್ತಿ ಪ್ರಮಾಣದ ಅರ್ಜಿಗಳನ್ನು ನ. 24 ರಂದು ಸಾಯಂಕಾಲ 5:30 ರೊಳಗಾಗಿ (ಕಚೇರಿ ದಿನಗಳಲ್ಲಿ ಮಾತ್ರ) ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
