
ನವದೆಹಲಿ, 5 ನವೆಂಬರ್ (ಹಿ.ಸ):
ಆ್ಯಂಕರ್ :
ಮಧ್ಯಪ್ರದೇಶದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರ ಈಗ ಮತ್ತಷ್ಟು ಬಿರುಸುಗೊಂಡಿದೆ. ಆಡಳಿತಾರೂಢ ಬಿಜೆಪಿ ಜೊತೆಗೆ, ಪ್ರತಿಪಕ್ಷ ಕಾಂಗ್ರೆಸ್ ಕೂಡ ತನ್ನ ಹಿರಿಯ ನಾಯಕರನ್ನು ಚುನಾವಣಾ ಪ್ರಚಾರದಲ್ಲಿ ಕಣಕ್ಕಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು, ನಿನ್ನೆ ಮತ್ತೆ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿದರು.ಇಂದು ಮಧ್ಯಾಹ್ನ ಸಿಯೋನಿಯಲ್ಲಿ ಮತ್ತು ಖಾಂಡ್ವಾದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಕೂಡ ಭೋಪಾಲ್ ನಲ್ಲಿ ಪ್ರಚಾರ ನಡೆಸಲಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕುಕ್ಷಿ ಮತ್ತು ಇಂದೋರ್ ನಲ್ಲಿ ರಾಲಿ ಳಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ರಾಜ್ಯದಲ್ಲಿ ೨೨ ರಾಲಿಗಳನ್ನು ನಡೆಸಲಿದ್ದಾರೆ. ಎಸ್ಪಿ, ಬಿಎಸ್ಪಿ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಇತರ ಪಕ್ಷಗಳು ಮತದಾರರನ್ನು ಸೆಳೆಯಲು ಪ್ರಚಾರ ನಡೆಸುತ್ತಿವೆ. ಮಧ್ಯಪ್ರದೇಶದಲ್ಲಿ ಒಟ್ಟು ೨ ಸಾವಿರದ ೫೩೩ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ ೧೭ ರಂದು ಮತದಾನ ನಡೆಯಲಿದ್ದು, ಡಿಸೆಂಬರ್ ೩ ರಂದು ಮತ ಎಣಿಕೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
