ಕೋಲ್ಕತ್ತಾ, 5 ನವೆಂಬರ್ (ಹಿ.ಸ):
ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಕೋಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಪಂದ್ಯಗಳ ನಡುವಣ ಕಾಳಗಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯ ಟೀಮ್ ಇಂಡಿಯಾಕ್ಕೆ ತುಂಬಾ ವಿಶೇಷ. ನವೆಂಬರ್ 5 ರಂದು ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹುಟ್ಟುಹಬ್ಬ. 35ನೇ ವಸಂತಕ್ಕೆ ಕಾಲಿಡಲಿರುವ ಕೊಹ್ಲಿಯ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ಸಿಎಬಿ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ನಾಯಕ ರೋಹಿತ್ ಶರ್ಮಾ ಕೂಡ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡುವ ಪ್ಲಾನ್ನಲ್ಲಿದ್ದಾರೆ.
ಈ ಬಾರಿಯ ವಿಶ್ವಕಪ್ನಲ್ಲಿ ಭಾರತ ಆಡಿರುವ ಎಲ್ಲ ಏಳು ಪಂದ್ಯಗಳಲ್ಲಿ ಗೆದ್ದು ಸೆಮಿ ಫೈನಲ್ಗೆ ಕ್ವಾಲಿಫೈಯರ್ ಆಗಿದೆ. ಇತ್ತ ದ. ಆಫ್ರಿಕಾ ಆಡಿರುವ ಏಳು ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಹರಿಣಗಳ ಪಡೆ ಭಾರತಕ್ಕೆ ಸುಲಭ ಸವಾಲಂತು ಅಲ್ಲವೇ ಅಲ್ಲ. ಟೀಮ್ ಇಂಡಿಯಾಕ್ಕೆ ಜಯಕೂಡ ಮುಖ್ಯ ಆಗಿರುವ ಕಾರಣ ಹೊಸ ಆಟಗಾರನನ್ನು ಕರೆತರುವ ಪ್ರಯತ್ನ ರೋಹಿತ್ ಮಾಡಬಹುದು.
ಹಿಂದೂಸ್ತಾನ್ ಸಮಾಚಾರ್
