
ಗಾಂಧೀನಗರ, 6 ನವೆಂಬರ್ (ಹಿ.ಸ):
ಆ್ಯಂಕರ್ :ಗುಜರಾತ್ ನ ಐಐಟಿ ಗಾಂಧೀನಗರದಲ್ಲಿ ಮೊದಲ ಆಸ್ಟ್ರೇಲಿಯಾ-ಭಾರತ ಶೈಕ್ಷಣಿಕ ಮತ್ತು ಕೌಶಲ್ಯ ಮಂಡಳಿ ಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಶಿಕ್ಷಣ ಮತ್ತು ಕೌಶಲ್ಯವನ್ನು ಒಂದೇ ವೇದಿಕೆಯಡಿ ತರಲಾಗಿದ್ದು, ಇದು ಉಭಯ ಹಿತಾಸಕ್ತಿಯ ವಲಯಗಳಲ್ಲಿ ಸಹಭಾಗಿತ್ವ, ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ನಿರೀಕ್ಷೆಯಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಆಸ್ಟ್ರೇಲಿಯಾದ ಶಿಕ್ಷಣ ಸಚಿವ ಜಸೋನ್ ಕ್ಲೇರ್ ಸಭೆಯ ಜಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡೂ ರಾಷ್ಟ್ರಗಳ ಶಿಕ್ಷಣ ಮತ್ತು ಕೌಶಲ್ಯ ವಲಯಗಳನ್ನು ಪ್ರೋತ್ಸಾಹಿಸುವ ಗುರಿಯೊಂದಿಗೆ ಶೈಕ್ಷಣಿಕ ತಜ್ಞರು ಚರ್ಚೆ ನಡೆಸಲು ಈ ಸಭೆ ವೇದಿಕೆ ಒದಗಿಸಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಸರ್ಕಾರಗಳ ಹಿರಿಯ ಅಧಿಕಾರಿಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
