
ಬಳ್ಳಾರಿ, 6 ನವೆಂಬರ್ (ಹಿ.ಸ):
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ನ.28ರೊಳಗೆ ಈ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ರಂಗಮಂದಿರ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
