ನವದೆಹಲಿ,7 ನವೆಂಬರ್ (ಹಿ.ಸ):
ಆ್ಯಂಕರ್ :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಇಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಉನ್ನತ ಮಟ್ಟದ ಭೇಟಿಗಾಗಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ರಾಷ್ಟ್ರಪತಿ ಅವರು ಭೇಟಿ ನೀಡಲಿರುವ ಸ್ಥಳಗಳಲ್ಲಿಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಉಧಮ್ ಸಿಂಗ್ ನಗರ ಜಿಲ್ಲೆಯ ಪಂತ್ನಗರ್ ವಿಶ್ವವಿದ್ಯಾಲಯದ ಗೋವಿಂದ್ ವಲ್ಲಭ್ ಪಂತ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ೩೫ ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ.
ನಾಳೆ ಬದರೀನಾಥ್ ಧಾಮ್ ಗೆ ರಾಷ್ಟ್ರಪತಿ ಭೇಟಿ ನೀಡಲಿದ್ದಾರೆ. ಇದಲ್ಲದೆ, ಶ್ರೀನಗರದ ಹೇಮಾವತಿ ನಂದನ್ ಬಹುಗುಣ ಗರ್ವಾಲ್ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಭಾಗವಹಿಸಲಿದ್ದಾರೆ.
ನವೆಂಬರ್ ೯ ರಂದು ರಾಷ್ಟ್ರಪತಿ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
