ಭೂಪಾಲ್,8 ನವೆಂಬರ್ (ಹಿ.ಸ):
ಆ್ಯಂಕರ್ :ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಇಂದೂ ಸಹ ಹಲವು ತಾರಾ ಪ್ರಚಾರಕರು ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಸತತ ಎರಡನೇ ದಿನವಾದ ಇಂದು ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದು, ಅವರು, ದಾಮೊಹ್, ಗುನಾ ಮತ್ತು ಮೊರೆನಾದಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವರು. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಉಜ್ಜೈನಿ ಮತ್ತು ದೇವಾಸ್ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವರು ಮತ್ತು ಇಂದೋರ್ನಲ್ಲಿ ರೋಡ್ ಶೊ ದಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
