ಬಳ್ಳಾರಿ, 8 ನವೆಂಬರ್ (ಹಿ.ಸ):
ಆ್ಯಂಕರ್ : ಗಾಂಧಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆ.ಅನುಸೂಯ (51) ನ.01 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೆÇಲೀಸ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಮಹಿಳೆಯ ಚಹರೆ ಗುರುತು: ಎತ್ತರ 5.4 ಅಡಿ, ದೃಢವಾದ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ರೆಡ್ ಮತ್ತು ಬ್ಲಾಕ್ ಹೂವಿನ ಡಿಜೈನ್ ಸೀರೆ, ಕಪ್ಪು ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಈ ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಗಾಂಧಿನಗರ ಪೆÇಲೀಸ್ ಠಾಣೆಯ ದೂ.08392-272192, ಪಿ.ಎಸ್.ಐ ಮೊ.9480803082, ಪಿ.ಐ ಮೊ.9480803046 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ
