ಹೊಸಪೇಟೆ, 8 ನವೆಂಬರ್ (ಹಿ.ಸ):
ಆ್ಯಂಕರ್ : ಜಿಲ್ಲಾಡಳಿತದಿಂದ ತಾಲ್ಲೂಕು ಮಟ್ಟದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ನ.18ರಂದು ಕೂಡ್ಲಿಗಿ ತಾಲ್ಲೂಕಿನ ಪರಿವೀಕ್ಷಣಾ ಮಂದಿರ (ಐಬಿ)ದಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಅವರು ತಿಳಿಸಿದ್ದಾರೆ.
ಸರ್ಕಾರದ ನಿರ್ದೇಶನದನ್ವಯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿರುವ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕೂಡ್ಲಿಗಿ ತಾಲ್ಲೂಕಿನ ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಿರುವಂತೆ ತಿಳಿಸಿದೆ.
