ಮುಂಬೈ,9 ನವೆಂಬರ್ (ಹಿ.ಸ):
ಆ್ಯಂಕರ್ :
ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಪರಿಷ್ಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಸದ್ಯ ಚಿನ್ನದಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿದರ ವಿಚಾರದಲ್ಲಿ ಸ್ಪಷ್ಟತೆ ಸಿಗುವವರೆಗೂ ಈ ಬೆಳವಣಿಗೆ ಮುಂದುವರಿಯುತ್ತದೆ. ಬಡ್ಡಿದರ ಹೆಚ್ಚಿಸಿದಲ್ಲಿ ಚಿನ್ನದ ಬೆಲೆ ಇನ್ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 9ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 56,100 ರೂ
ಚೆನ್ನೈ: 56,600 ರೂ
ಮುಂಬೈ: 56,100 ರೂ
ದೆಹಲಿ: 56,250 ರೂ
ಕೋಲ್ಕತಾ: 56,100 ರೂ
ಕೇರಳ: 56,100 ರೂ
ಅಹ್ಮದಾಬಾದ್: 56,150 ರೂ
ಜೈಪುರ್: 56,250 ರೂ
ಲಕ್ನೋ: 56,250 ರೂ
ಭುವನೇಶ್ವರ್: 56,100 ರೂ
ಹಿಂದೂಸ್ತಾನ್ ಸಮಾಚಾರ್
