ಬೆಂಗಳೂರು,9 ನವೆಂಬರ್ (ಹಿ.ಸ):
ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 41ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಝಿಲೆಂಡ್ ಮತ್ತು ಕುಸಲ್ ಮೆಂಡಿಸ್ ಅವರ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಲಂಕಾಗೆ ಇದೊಂದು ಔಪಚಾರಿಕ ಪಂದ್ಯ. ಆದರೆ, ಕಿವೀಸ್ ಪಡೆ ಹಾಗಲ್ಲ. ಸೆಮಿ ಫೈನಲ್ಗೆ ಏರಬೇಕೆಂದರೆ ಕೇನ್ ಪಡೆಗೆ ಈ ಪಂದ್ಯವನ್ನು ಗೆಲ್ಲಲೇ ಬೇಕು. ಭಾರತ, ಆಫ್ರಿಕಾ, ಆಸ್ಟ್ರೇಲಿಯಾ ಹೀಗೆ ಮೂರು ತಂಡಗಳು ಸೆಮೀಸ್ಗೆ ತಪುಪಿದೆ. ಇನ್ನೊಂದು ಸ್ಥಾನಕ್ಕಾಗಿ ನ್ಯೂಝಿಲೆಂಡ್, ಪಾಕ್, ಅಫ್ಘಾನ್ ಹೋರಾಡುತ್ತಿದೆ.
ಹಿಂದೂಸ್ತಾನ್ ಸಮಾಚಾರ್
