
ನವದೆಹಲಿ,9 ನವೆಂಬರ್ (ಹಿ.ಸ):
ಆ್ಯಂಕರ್ :
ಮಧ್ಯಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಮುಂದುವರೆದಿದೆ. ಎಲ್ಲಾ ಪಕ್ಷಗಳ ತಾರಾ ಪ್ರಚಾರಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಜನರ ವಿದ್ಯುತ್ ಬಿಲ್ ಅನ್ನು ಶೂನ್ಯಕ್ಕೆ ಇಳಿಸುವುದಲ್ಲದೆ ವಿದ್ಯುತ್ ಮಾರಾಟದ ಮೂಲಕವೂ ಹಣ ಗಳಿಸುವ ಸೌರ ಇಂಧನ ಯೋಜನೆಯನ್ನು ಸರ್ಕಾರ ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ನಿನ್ನೆ ಮಧ್ಯಪ್ರದೇಶದ ದಮೋಹ್, ಗುನಾ ಮತ್ತು ಮೊರೆನಾದಲ್ಲಿ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಉಜ್ವಲಾ ಯೋಜನೆಯ ಮೂಲಕ ಮಹಿಳೆಯರಿಗೆ ಹೊಗೆಯಿಂದ ಮುಕ್ತಿ ನೀಡುತ್ತಿರುವುದನ್ನು ಉಲ್ಲೇಖಿಸಿದ ಪ್ರಧಾನಿ, ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ೫೦೦ ರೂಪಾಯಿ ಕಡಿಮೆ ಮಾಡಲಾಗಿದೆ ಎಂದರು. ಕೊಳವೆಗಳ ಮೂಲಕ ಎಲ್ಪಿಜಿಯನ್ನು ತಲುಪಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮೋದಿ ಹೇಳಿದರು. ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಖಾಂಡ್ವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್, ಸೇರಿದಂತೆ ಹಲವು ಹಿರಿಯ ನಾಯಕರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್
