
ಮಂಡ್ಯ, 10ನವೆಂಬರ್ (ಹಿ.ಸ):
ಆ್ಯಂಕರ್ : ನ.10: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಟಿಪ್ಪು ವಕ್ಫ್ ಎಸ್ಟೇಟ್, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ.
ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ. ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಯಾವುದೇ ಘೋಷಣೆ ಕೂಗದಂತೆ, ಪ್ರಚೋದನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
