
ನವದೆಹಲಿ,11ನವೆಂಬರ್ (ಹಿ.ಸ):
ಆ್ಯಂಕರ್ :ಭಾರತ ಮತ್ತು ಅಮೆರಿಕ ದೇಶಗಳ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಉಭಯ ದೇಶಗಳ ನಡುವಣ ೨ ೨ ಸಚಿವರುಗಳ ಮಾತುಕತೆಯು ಪ್ರಮುಖವೆನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಭಾರತ ಮತ್ತು ಅಮೆರಿಕ ದೇಶಗಳು ಪ್ರಜಾಪ್ರಭುತ್ವ, ಬಹುತ್ವ ಹಾಗೂ ಕಾನೂನಿನ ಆಡಳಿತದಲ್ಲಿ ನಂಬಿಕೆಯನ್ನು ಪರಸ್ಪರ ಹಂಚಿಕೊಂಡಿರುತ್ತವೆ. ಜಾಗತಿಕವಾಗಿ ಭಾರತ ಮತ್ತು ಅಮೆರಿಕ ನಡುವಿನ ಕಾರ್ಯತಂತ್ರ ಪಾಲುದಾರಿಕೆಯು ವಿಭಿನ್ನ ವಲಯಗಳಲ್ಲಿ ಪರಸ್ಪರ ಸಹಕಾರವನ್ನು ಒದಗಿಸುತ್ತದೆ ಎಂದು ಹೇಳಿದರು. ಭಾರತ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯು ಜಾಗತಿಕವಾಗಿ ಒಂದು ಶಕ್ತಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ನಿನ್ನೆ ಅವರು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಿಯೋರ್ಡ್ ಆಸ್ಟಿನ್ ಮತ್ತು ಆ ದೇಶದ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರೊಂದಿಗೂ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅಮೆರಿಕದ ಆ ಇಬ್ಬರು ಕಾರ್ಯದರ್ಶಿಗಳು ಭಾರತದೊಂದಿಗಿನ ೨ ೨ ಮಾತುಕತೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರೊಂದಿಗೆ ನಡೆಸಿದ ಚರ್ಚೆ ಕುರಿತು ಮಾಹಿತಿ ನೀಡಿದರು. ರಕ್ಷಣೆ, ತಂತ್ರಜ್ಞಾನದಲ್ಲಿನ ಆವಿಷ್ಕಾರ, ಬಾಹ್ಯಾಕಾಶ, ಆರೋಗ್ಯ ಸೇರಿದಂತೆ ವಿವಿಧ ವಲಯಗಳಲ್ಲಿನ ದ್ವಿಪಕ್ಷೀಯ ಸಹಕಾರದ ಪ್ರಗತಿಯ ಕುರಿತು ಪ್ರಧಾನಿ ಅವರಿಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿರುವುದಾಗಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
