
ಬೆಂಗಳೂರು , 12ನವೆಂಬರ್ (ಹಿ.ಸ):
ಆ್ಯಂಕರ್ : ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜನರು ಖರೀದಿ ಭರಾಟೆಗೆ ಮುಂದಾಗಿದ್ದಾರೆ. ಇಂದು ನರಕ ಚತುರ್ದಶಿ ಮತ್ತು ಧನಲಕ್ಷ್ಮೀ ಪೂಜೆ ಹಿನ್ನೆಲೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ ಜನರು ದಾಂಗುಡಿಯಿಟ್ಟಿದ್ದಾರೆ. ಹೂವು, ಹಣ್ಣುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಇನ್ನು ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲೆ ಅನಧಿಕೃತವಾಗಿ ಗ್ರಾಹಕರು ವಾಹನಗಳ ಪಾರ್ಕಿಂಗ್ ಮಾಡಿದ್ದಾರೆ. ಹಾಗಾಗಿ ಕಿರಿದಾದ ಮೇಲ್ಸೆತುವೆ ಮೇಲೆ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದ್ದು, ಹಣ್ಣು, ಹೂವುಗಳ ದರ ಏರಿಕೆ ಆಗಿದೆ. ಮಾರು ಹೂವಿನ ಬೆಲೆ 50 ರೂ ಏರಿಕೆ ಆಗಿದ್ದು, ಹೂ, ಹಣ್ಣುಗಳ ಖರೀದಿಗೆ ಗ್ರಾಹಕರು ಆಗಮಿಸುತ್ತಿದ್ದಾರೆ. ನಾಳೆ ದೀಪಾವಳಿ ಅಮವಾಸ್ಯೆ, ಬಲಿಂದ್ರನ ಪೂಜೆ, ಮಂಗಳವಾರ ಬಲಿಪಾಡ್ಯಮಿ ದೀಪಾವಳಿ ಹಬ್ಬದ ಚಂದ್ರದರ್ಶನ ಇದೆ.
ಹಿಂದೂಸ್ತಾನ್ ಸಮಾಚಾರ್
