
ನವದೆಹಲಿ,14ನವೆಂಬರ್ (ಹಿ.ಸ):
ಆ್ಯಂಕರ್ :ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಅಂತಿಮ ಹಂತದಲ್ಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿವೆ.
ಬಿಜೆಪಿ ಹಿರಿಯ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಅನೇಕ ಕೇಂದ್ರ ಸಚಿವರುಗಳು ನಿನ್ನೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.
ಕಾಂಗ್ರಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕೂಡ ಅನೇಕ ಕಡೆ ನಿನ್ನೆ ರ್ಯಾಲಿ ಮತ್ತು ರೋಡ್ ಶೋ ಮೂಲಕ ಮತದಾರರಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಿದರು. ಹಾಗೆಯೇ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ಆಮ್ ಆದ್ಮಿ ಪಕ್ಷ ಹಾಗೂ ಗೊಂಡವಾನ ಗಣತಂತ್ರ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಸ್ವತಂತ್ರ ಅಭ್ಯರ್ಥಿಗಳು ಕೂಡ ನಿನ್ನೆ ಚುನಾವಣಾ ಪ್ರಚಾರದಲ್ಲಿ ಮತ ಯಾಚಿಸಿದರು. ಮಧ್ಯಪ್ರದೇಶದಲ್ಲಿ ನವೆಂಬರ್ ೧೭ರಂದು ಮತದಾನ ನಡೆಯಲಿದ್ದು, ಡಿಸೆಂಬರ್ ೩ ರಂದು ಮತಗಳ ಎಣಿಕೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
