ಬೆಂಗಳೂರು,15ನವೆಂಬರ್ (ಹಿ.ಸ):
ಆ್ಯಂಕರ್ :
ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ ಇಂದು(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
