ಮುಂಬೈ,15ನವೆಂಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡಕ್ಕೆ ಇದೀಗ ನಿಜವಾದ ಪರೀಕ್ಷೆ ಪ್ರಾರಂಭವಾಗಿದೆ. ಇಂದು ಐಸಿಸಿ ಏಕದಿನ ವಿಶ್ವಕಪ್ 2023 ಮೊದಲ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
