
ಕುರುಕ್ಷೇತ್ರ,15ನವೆಂಬರ್ (ಹಿ.ಸ):
ಆ್ಯಂಕರ್ :
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ (ಎನ್ಎಚ್) 152ರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರನ್ನು ಕುರುಕ್ಷೇತ್ರದ ಎಲ್ಎನ್ಜೆಪಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರು ಪೆಹೋವಾದಲ್ಲಿನ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 152ರ ಟಿಕ್ರಿ ಗ್ರಾಮದ ಬಳಿ ಕಾರೊಂದು ಪಲ್ಟಿಯಾಗಿ ಇನ್ನೊಂದು ಬದಿಯಲ್ಲಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದಾರುಣವಾಗಿ ಸಾವನ್ನಪ್ಪಿದ್ದು, ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 152ರ ಟಿಕ್ರಿ ಗ್ರಾಮದ ಬಳಿ ನಡೆದ ಘಟನೆಯ ಕುರಿತು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
