ಮಂಗಳೂರು, ನವೆಂಬರ್ 16(ಹಿ.ಸ):
ಆ್ಯಂಕರ್ : ಪ್ರಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕರಾಗಿರುವ ವಾಸುಕಿ ವೈಭವ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲ ದ ಪ್ರೆಯಸಿ ಬೃಂದಾ ವಿಕ್ರಮ್ ಜೊತೆ ಅವರು ಹಸೆಮಣೆ ಏರಿದ್ದಾರೆ. ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ, ಸಂಪ್ರದಾಯ ಬದ್ಧವಾಗಿ ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಮ್ ಅವರು ಮದುವೆ ಆಗಿದ್ದಾರೆ.
ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಮ್ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬೃಂದಾ ವಿಕ್ರಮ್ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಹೆಚ್ಚಾಗಿ ಅವರು ಮಾಧ್ಯಮಗಳ ಎದುರು ಕಾಣಿಸಿಕೊಂಡಿಲ್ಲ. ವಾಸುಕಿ ಮತ್ತು ಬೃಂದಾ ಅವರು ತಮ್ಮ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಈಗ ಅವರು ಬದುಕಿನ ಪ್ರಮುಖ ಘಟ್ಟಕ್ಕೆ ಬಂದಿದ್ದಾರೆ.
ಬೃಂದಾ ವಿಕ್ರಮ್ ರೀತಿಯೇ ವಾಸುಕಿ ವೈಭವ್ ಕೂಡ ರಂಗಭೂಮಿಯಲ್ಲಿ ಅನುಭವ ಗಳಿಸಿದ್ದಾರೆ. ಹೊಸ ಜೀವನ ಆರಂಭಿಸುತ್ತಿರುವ ಈ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.
ಹಿಂದುಸ್ಥಾನ್ ಸಮಾಚಾರ/ಸು.ಕು/ಯ.ಮ
