
ನವದೆಹಲಿ,17ನವೆಂಬರ್ (ಹಿ.ಸ):
ಆ್ಯಂಕರ್ :ದಳಪತಿ ವಿಜಯ್ ಸೌತ್ ಇಂಡಸ್ಟ್ರಿಯ ಟಾಪ್ ಹೀರೋಗಳಲ್ಲಿ ಒಬ್ಬರು. ತಮಿಳಿನಲ್ಲಿ ಮಾತ್ರವಲ್ಲದೆ ಕನ್ನಡ, ತೆಲುಗಿನಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಜಯ್ ಅಭಿನಯದ ಸಿನಿಮಾಗಳು ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತವೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ‘ವಾರಿಸು’ ಸಿನಿಮಾ ಗೆಲುವು ಕಂಡಿತು. ‘ಲಿಯೋ’ ಸಿನಿಮಾ ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಪಡೆಯಿತಾದರೂ, ಬಾಕ್ಸ್ ಆಫೀಸ್ನಲ್ಲಿ ಬ್ಲಾಕ್ಬಸ್ಟರ್ ಹಿಟ್ ಎನಿಸಿಕೊಂಡಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರದ ಒಟಿಟಿ ಪ್ರಸಾರದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.
ಹಿಂದೂಸ್ತಾನ್ ಸಮಾಚಾರ್
