ನವದೆಹಲಿ,17ನವೆಂಬರ್ (ಹಿ.ಸ):
ಆ್ಯಂಕರ್ :ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತಗೊಂಡಿದ್ದು, 40 ಕಾರ್ಮಿಕರು ಒಳಗೆ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಶುಕ್ರವಾರ ಆರನೇ ದಿನಕ್ಕೆ ಕಾಲಿಟ್ಟಿದ್ದು, ರ್ ಧಾಮ್ ಮಾರ್ಗದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ಕಾಯುವಿಕೆ ಮುಂದುವರೆದಿದೆ. ಮಂಗಳವಾರ ಭೂ ಕುಸಿತ ಉಂಟಾದ ಕಾರಣ ರಕ್ಷಣಾ ಕಾರ್ಯ ವಿಳಂಬವಾಗಿತ್ತು, ಇದೀಗ ದೆಹಲಿಯಿಂದ ಹೊಸ ಯಂತ್ರವನ್ನು ತರಿಸಿಕೊಳ್ಳಲಾಗಿದ್ದು, ಕಾರ್ಮಿಕರ ರಕ್ಷಣೆಗೆ ಇನ್ನೂ 2-3 ದಿನಗಳು ತಗುಲಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕರು ಸುರಕ್ಷಿತವಾಗಿದ್ದು, ಅವರಿಗೆ ಪೈಪ್ಗಳ ಮೂಲಕ ಆಮ್ಲಜನಕ, ವಿದ್ಯುತ್, ಔಷಧಗಳು, ಆಹಾರ ಪದಾರ್ಥಗಳು ಮತ್ತು ನೀರನ್ನು ನಿರಂತರವಾಗಿ ಸರಬರಾಜು ಮಾಡಲಾಗುತ್ತಿದೆ.
ನವೆಂಬರ್ 12 ರಿಂದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಸ್ಥಳಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಚಿವ ವಿಕೆ ಸಿಂಗ್ ಹೇಳಿದ್ದಾರೆ. ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದೇನೆ ಅವರು ಸುರಕ್ಷಿತವಾಗಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್
