ಬಳ್ಳಾರಿ,17ನವೆಂಬರ್ (ಹಿ.ಸ):
ಆ್ಯಂಕರ್ :
ಬಳ್ಳಾರಿ ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲಂಚ ಪಡೆಯುತ್ತಿದ್ದ ಆರ್ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್ನನ್ನು ವಶಕ್ಕೆ ಪಡೆದಿದ್ದಾರೆ. ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಲೋಕಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದರು. ಲೋಕಾಯುಕ್ತ ಎಸ್ಪಿ ಶಶಿಧರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್
