
ನವದೆಹಲಿ,21ನವೆಂಬರ್ (ಹಿ.ಸ):
ಆ್ಯಂಕರ್ :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವರ್ಚುವಲ್ ಮೂಲಕ ಜಿ-೨೦ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-೨೦ ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ, ವರ್ಚುವಲ್ ಮೂಲಕ ಸಮಾರೋಪ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಜಿ-೨೦ ರಾಷ್ಟ್ರಗಳ ನಾಯಕರು, ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವ ಆಫ್ರಿಕಾ ಒಕ್ಕೂಟದ ನಾಯಕರು ಪಾಲ್ಗೊಳ್ಳಲಿದ್ದಾರೆ.
೯ ಅತಿಥಿ ರಾಷ್ಟ್ರಗಳ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳನ್ನು ಈ ಶೃಂಗಸಭೆಗೆ ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
