ದುಬೈ , 22ನವೆಂಬರ್ (ಹಿ.ಸ):
ಆ್ಯಂಕರ್ :
: ಕ್ರೀಡೆಯ ಸಮಗ್ರತೆ ಮತ್ತು ಆಟಗಾರರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಹೇರಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಐಸಿಸಿ ಸಭೆಯಲ್ಲಿ ) ಈ ನಿರ್ಧಾರ ಪ್ರಕಟಿಸಲಾಗಿದೆ. ಈ ನಿರ್ಧಾರವು ಮಹಿಳಾ ಕ್ರಿಕೆಟ್ನ ಸಾರವನ್ನು ರಕ್ಷಿಸುವ ಗುರಿ ಹೊಂದಿದೆ. ಆಟದ ಸಮಗ್ರತೆ, ಸುರಕ್ಷತೆ ಮತ್ತು ಒಳಗೊಳ್ಳುವಿಕೆಯನ್ನು ಕೇಂದ್ರೀಕರಿಸಿದ ಈ ನಿಯಮಗಳನ್ನ ಮಾಡಲಾಗಿದ್ದು, 2 ವರ್ಷಗಳಲ್ಲಿ ಮೌಲ್ಯಮಾಪನಕ್ಕೆ ಒಳಗಾಗುತ್ತವೆ ಎಂಬುದಾಗಿ ತಿಳಿಸಿದೆ.
ಜನನದ ಸಮಯದಲ್ಲಿ ಪುರುಷನಾಗಿದ್ದು, ಪುರುಷನಾಗಿಯೇ ಪ್ರೌಢಾವಸ್ಥೆಗೆ ಒಳಗಾದ ವ್ಯಕ್ತಿ, ನಂತರದಲ್ಲಿ ಲಿಂಗ ಬದಲಾವಣೆ ಕಾರ್ಯವಿಧಾನಗಳಿಗೆ ಒಳಗಾಗಿದ್ದರೇ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅರ್ಹತೆ ಪಡೆಯುವುದಿಲ್ಲ ಎಂಬುದನ್ನು ಐಸಿಸಿ ದೃಢೀಕರಿಸಿದೆ. 9 ತಿಂಗಳ ಸಮಾಲೋಚನೆಯ ನಂತರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಸೇರಿದಂತೆ ಐಸಿಸಿ ಮಂಡಳಿಯು ಈ ಲಿಂಗ ಅರ್ಹತಾ ನಿಯಮಗಳನ್ನು ಅಂತಿಮಗೊಳಿಸಿತು.
ಹಿಂದೂಸ್ತಾನ್ ಸಮಾಚಾರ್
