ಬೆಂಗಳೂರು , 22ನವೆಂಬರ್ (ಹಿ.ಸ):
ಆ್ಯಂಕರ್ :
ಹೊಸ ಸಿನಿಮಾಗಳನ್ನು ಜನರಿಗೆ ತಲುಪಿಸುವಲ್ಲಿ ಒಟಿಟಿ ಪ್ಲಾಟ್ಫಾರ್ಮ್ಗಳ ನಡುವೆ ಪೈಪೋಟಿ ಇದೆ. ‘ಜಿಯೋ ಸಿನಿಮಾ’ ಒಟಿಟಿ ಕೂಡ ಅನೇಕ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ‘800’ ಸಿನಿಮಾ ಕೂಡ ಶೀಘ್ರದಲ್ಲೇ ‘ಜಿಯೋ ಸಿನಿಮಾ’ದಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಅಂದಹಾಗೆ, ಇದು ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಅವರ ಜೀವನವನ್ನು ಆಧರಿಸಿ ಸಿದ್ಧವಾದ ಸಿನಿಮಾ. ಈ ಚಿತ್ರಕ್ಕೆ ಎಂ.ಎಸ್. ಶ್ರೀಪತಿ ನಿರ್ದೇಶನ ಮಾಡಿದ್ದಾರೆ. ಡಿಸೆಂಬರ್ 2ರಿಂದ ಒಟಿಟಿಯಲ್ಲಿ ಈ ಸಿನಿಮಾ ಸ್ಟ್ರೀಮ್ ಆಗಲಿದೆ.
ಶ್ರೀಲಂಕಾದ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಬದುಕಿನ ಸಾಧನೆಗಳನ್ನು ‘800’ ಸಿನಿಮಾದಲ್ಲಿ ತೋರಿಸಲಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಬರೋಬ್ಬರಿ 800 ವಿಕೆಟ್ಗಳನ್ನು ಪಡೆದಿದ್ದು ಮುತ್ತಯ್ಯ ಮುರಳೀಧರನ್ ಅವರ ಸಾಧನೆ. ಅದೇ ಕಾರಣಕ್ಕಾಗಿ ಈ ಸಿನಿಮಾಗೆ ಈ ಶೀರ್ಷಿಕೆ ಇಡಲಾಗಿದೆ. ಸಿನಿಪ್ರಿಯರಿಗೆ ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಈ ಸಿನಿಮಾ ಇಷ್ಟ ಆಗಲಿದೆ. ವಿವೇಕ್ ರಂಗಾಚಾರಿ ನಿರ್ಮಾಣ ಮಾಡಿರುವ ಈ ಸಿನಿಮಾ ತಮಿಳು ಮಾತ್ರವಲ್ಲದೇ ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
