
ಮಥುರಾ , 22ನವೆಂಬರ್ (ಹಿ.ಸ):
ಆ್ಯಂಕರ್ :
ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಥುರಾಕ್ಕೆ ಭೇಟಿ ನೀಡಲಿದ್ದಾರೆ. ಸಂತ ಮೀರಾಬಾಯಿ ಅವರ ೫೨೫ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ವೇಳೆ ಪ್ರಧಾನಿ ಅವರು ಸಂತ ಮೀರಾಬಾಯಿ ಅವರ ಗೌರವಾರ್ಥ ಅಂಚೆ ಚೀಟಿ ಹಾಗೂ ಸ್ಮಾರಕ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಅಲ್ಲದೆ, ಅವರು ಇದೇ ಸಮಯದಲ್ಲಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಸಹ ಭಾಗವಹಿಸಲಿದ್ದಾರೆ.
ಸಂತ ಮೀರಾಬಾಯಿ ನೆನಪಿನಲ್ಲಿ ಇಡೀ ವರ್ಷ ಆಚರಣೆಗಳು ನಡೆಯಲಿವೆ.
ಹಿಂದೂಸ್ತಾನ್ ಸಮಾಚಾರ್
