ಬೆಂಗಳೂರು,24ನವೆಂಬರ್ (ಹಿ.ಸ):
ಆ್ಯಂಕರ್ :ಬೆಂಗಳೂರು ಅರಮೆನೆ ಮೈದಾನದಲ್ಲಿ ಇಂದಿನಿಂದ (ನ.24) ಮೂರು ದಿನಗಳ ಕಾಲ ಕಂಬಳ ಪಂದ್ಯ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಂಬಳ ಕಾರ್ಯಕ್ರಮ ಉದ್ಘಾಟಿಸಲಾಗುತ್ತದೆ. ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ.
ನಾಳೆ(ನವೆಂಬರ್ 25) ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. ಈ ಕಂಬಳವನ್ನು ವೀಕ್ಷಿಸಲು ಲಕ್ಷಾಂತರ ಜನರು ಬರುವ ನಿರೀಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್
