ಉತ್ತರಕಾಶಿ,25ನವೆಂಬರ್ (ಹಿ.ಸ):
ಆ್ಯಂಕರ್ :
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಮಾರ್ಗದಲ್ಲಿ ಸಿಲುಕಿರುವ ೪೧ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್.ಎ. ಹಸ್ನೈನ್, ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಸರ್ಕಾರದ ಹಲವು ಸಂಸ್ಥೆಗಳು ಅವಿರತವಾಗಿ ಶ್ರಮಿಸುತ್ತಿವೆ. ಕೆಲವು ಅಡೆತಡೆಗಳಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿತ್ತು. ಆನಂತರ ಕಾರ್ಯಾಚರಣೆ ಪುನರಾರಂಭಿಸಲಾಗಿದ್ದು, ರಕ್ಷಣಾ ತಂಡ ಬಹುತೇಕ ೪೫ ರಿಂದ ೪೬ ಮೀಟರ್ ತಲುಪಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
