

ಕೊಪ್ಪಳ, 26 ನವೆಂಬರ್ (ಹಿ.ಸ):
ಆ್ಯಂಕರ್ : ಜಿಲ್ಲಾಡಳಿತದಿಂದ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಸಮ್ಮುಖದಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ ಕೋಕರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಪ್ಪಣ್ಣ ಸಿರಸಗಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
