
ಬೆಂಗಳೂರು , 28ನವೆಂಬರ್ (ಹಿ.ಸ):
ಆ್ಯಂಕರ್ :
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಸೋಮವಾರ ಬೆಂಗಳೂರಿನ ಕೆಲವೆಡೆ ತುಂತುರು ಮಳೆಯಾಗಿದೆ, ಇಂದು ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
