
ಬೆಂಗಳೂರು, 29 ನವೆಂಬರ್ (ಹಿ.ಸ):
ಆ್ಯಂಕರ್ :ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್
