
ಕೋಲಾರ, ೨೯ ನವೆಂಬರ್ (ಹಿ.ಸ) :
ಆ್ಯಂಕರ್ : ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಡಿ.೧ ರಿಂದ ೩ರ ವರೆಗೆ ಮೂರು ದಿನಗಳ ಕಾಲ ಚಾಂಫೀಯನ್ರೀಫ್ಸ್ನಲ್ಲಿನ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ೨೦೨೩ನೇ ಸಾಲಿನ ಪೊಲೀಸ್ ಕ್ರೀಡಾಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.೧ ರಂದು ಶುಕ್ರವಾರ ಬೆಳಿಗ್ಗೆ ೦೯.೦೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮವು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಅವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರಿಂದ ನೆರವೇರಲಿದೆ.
ಡಿ.೩ ರಂದು ಭಾನುವಾರ ಸಂಜೆ ೦೩.೦೦ ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನಗಳ ವಿತರಣೆ ಮಾಡುವರು.
ಮೂರು ದಿನಗಳ ನಡೆಯುವ ವಾರ್ಷಿಕ ಪೊಲೀಸ್ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಲಿಪಿಕ ನೌಕರರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಅವರು ಕೋರಿದ್ದಾರೆ.
