ಬೆಳಗಾವಿ,30 ನವೆಂಬರ್ (ಹಿ.ಸ):
ಆ್ಯಂಕರ್ :
ಇದೇ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ರಾಜ್ಯ ವಿಧಾನಮಂಡಲ ಚಳಿಗಾಲ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಮಾಹಿತಿ ನೀಡಿದ್ದಾರೆ. ಇನ್ನು ಇಷ್ಟೊಂದು ಸಂಖ್ಯೆಯ ಪೊಲೀಸರ ವಾಸ್ತವ್ಯಕ್ಕೆ ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ನೊಂದಿಗೆ ಬೃಹತ್ ಟೌನ್ ಶಿಪ್ ನಿರ್ಮಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
