ನವದೆಹಲಿ, 1 ಡಿಸೆಂಬರ್(ಹಿ.ಸ):
ಆ್ಯಂಕರ್ :
ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್ನಲ್ಲಿ ಹಂಚಿಕೊಂಡಿದೆ. ಈ ಕಪ್ಪು ಚಿರತೆ ಅರಣ್ಯಾಧಿಕಾರಿಗಳು ಹುಲಿಗಳ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಕಪ್ಪು ಚಿರತೆ ಫೋಟೋಗಳು ಈ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಫೋಟೋಗಳನ್ನು ಎಕ್ಸ್ನಲ್ಲಿ ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಸಂತ ನಂದಾ ಹಂಚಿಕೊಂಡಿದ್ದಾರೆ.
ಸುಸಂತ ನಂದಾ ಅವರು ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಅವುಗಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಹೇಳಲಾಗಿದೆ. ಒಡಿಶಾದಲ್ಲಿ ಕ್ಯಾಮೆರಾ ಟ್ರ್ಯಾಪ್ ಹುಲಿ ಗಣತಿಯನ್ನು ಮಾಡಲಾಗುತ್ತಿದೆ. ಕಾಡು ಪ್ರಾಣಿಗಳ ಪ್ರತಿ ಚಲನವಲನಗಳು ಈ ಕ್ಯಾಮರದಲ್ಲಿ ಸೆರೆಯಾಗುತ್ತಿದೆ. ಅಲ್ಲಿ ನಡೆಯುವ ಪ್ರತಿಯೊಂದು ಸಂಗತಿಗಳು ಅರಣ್ಯಾ ಇಲಾಖೆಗೆ ತಿಳಿಯುತ್ತಿದೆ ಎಂದು ಎಕ್ಸ್ನಲ್ಲಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
