ರಾಯಚೂರು, 1 ಡಿಸೆಂಬರ್(ಹಿ.ಸ):
ಆ್ಯಂಕರ್: 2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ 7 ಯೋಜನೆಗಳಿಗೆ ಸೇವಾ-ಸಿಂಧು ತಂತ್ರಾಂಶದಡಿ (ಪೋರ್ಟಲ್) ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಜಿಗಳನ್ನು ಸಲ್ಲಿಸಲು ಡಿ.15 ಕೊನೆಯ ದಿನಾಂಕ ವಾಗಿರುತ್ತದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಗಳ ವಿವರ: ಮೇರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರುದ್ಯೋಗ ಭತ್ಯೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಶಿಶು ಪಾಲನಾ ಭತ್ಯೆ ಈ ಮೇಲಿನ 07 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ಡಿ.15 ಎಂದು ಮರು ನಿಗದಿಪಡಿಸಿದೆ. ಈ ಕೆಳಕಂಡ 7 ಯೋಜನೆಗಳಿಗೆ ಮಾತ್ರ ಅರ್ಜಿಗಳನ್ನು ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಈ ಮೇಲಿನ 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ-ಸಿಂಧು ತಂತ್ರಾಂಶದಲ್ಲಿ ಸಲ್ಲಿಸಲು ತಿಳಿಸಲಾಗಿದೆ.
ಈ ಮೇಲಿನ ಇಲಾಖಾ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಹೆಚ್ಚುವರಿ ಕಾಲಾವಕಾಶ ನೀಡಲಾಗುವುದಿಲ್ಲ. ಜಿಲ್ಲಾ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳು ನಿಗಧಿಸಿಪಡಿಸಿದ ದಿನಾಂಕದೊಳಗಾಗಿ ಅರ್ಜಿಗಳನ್ನು ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, (ವಿಆರ್ಡಬ್ಲ್ಯೂ) ಕಾರ್ಯಕರ್ತರಿಗೆ ಸಲ್ಲಿಸುವುದು. ಹಾಗೂ ನಗರ ಪ್ರದೇಶದಲ್ಲಿ ಪುರಸಭೆ ಹಾಗೂ ನಗರ ಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಆರ್ಡಬ್ಲ್ಯೂ ಕಾರ್ಯಕರ್ತರಿಗೆ ಸಲ್ಲಿಸುವುದು.
ಜಿಲ್ಲಾ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳು ಯಾವುದೇ ಅರ್ಜಿಯನ್ನು ನೇರವಾಗಿ ಇಲಾಖೆಗೆ ಸಲ್ಲಿಸಿದ್ದಲ್ಲಿ ಪರಿಗಣಿಸಲಾಗುವುದಿಲ್ಲ. ಇಲಾಖೆಯ ಯಾವುದೇ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾರ್ಗದರ್ಶನವನ್ನು ಈ ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08532-200992 ರಿಂದ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹುದೆಂದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
